ಶಿವಮೊಗ್ಗ: ರೈತರ ಸಮಸ್ಯೆ ಬಗೆಹರಿಸುವಲ್ಲಿರ ಸರ್ಕಾರ ವಿಫಲವಾಗಿದೆ ನಗರದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಆರೋಪ
ರೈತರ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಶಿವಮೊಗ್ಗ ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಸರ್ಕಾರಕ್ಕೆ ಒಂದು ವರ್ಷವಾಗಿದೆ. ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ಸರ್ಕಾರ ವಿಫಲವಾಗಿದೆ. ಇನ್ನಾ ಗ್ಯಾರಂಟಿಗಳಲ್ಲಿ ಮುಳುಗಿ ಅಭಿವೃದ್ಧಿಯನ್ನೇ ಕಡೆಗಾಡಿಸಿದ್ದಾರೆ.ಕೂಡಲೇ ರೈತರ ಬೇಡಿಕೆಗಳನ್ನ ಈಡೇರಿಸುವಂತೆ ಕೋಡಿಹಳ್ಳಿ ಚಂದ್ರಶೇಖರ್ ಅವರು ಒತ್ತಾಯಿಸಿದರು.