ಮಸ್ಕಿ: ಪಟ್ಟಣದಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಹಿನ್ನೆಲೆ ಭಾನುವಾರ ವಿದ್ಯುತ್ ವ್ಯತ್ಯಯ
Maski, Raichur | Mar 30, 2024 ಮಸ್ಕಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಬಸವೇಶ್ವರ ವೃತ್ತದಿಂದ ಮುದಗಲ್ ಕ್ರಾಸ್ವರೆಗೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ರಸ್ತೆ ಬದಿಯ ವಿದ್ಯುತ್ ಕಂಬಗಳ ಸ್ಥಳಾಂತರ ನಡೆಯುತ್ತಿದೆ. ಹೀಗಾಗಿ ಮಾ.31ರ ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವೆಂಕಟೇಶ್ ಶನಿವಾರ ತಿಳಿಸಿದ್ದಾರೆ. ಪಟ್ಟಣದ ಹಳೆ ಪೊಲೀಸ್ ಠಾಣೆ, ಸೋಮನಾಥ ನಗರ, ಭ್ರಮರಾಂಬ ದೇವಸ್ಥಾನ, ಹಳೆ ಬಸ್ ನಿಲ್ದಾಣ ಹಾಗೂ ಬಳಗಾನೂರು ರಸ್ತೆ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.