ಶಿರಹಟ್ಟಿ: ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸಿ ಜನರ ದಾರಿ ತಪ್ಪಿಸುತ್ತಿದ್ದಾರೆ: ಪಟ್ಟಣದಲ್ಲಿ ಶಾಸಕ ಚಂದ್ರು ಲಮಾಣಿ
ಒಳ ಮೀಸಲಾತಿ ವರ್ಗೀಕರಣದ ಕುರಿತು ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಣಯ ವಿರೋಧಿಸಿ ಪಟ್ಟಣದಲ್ಲಿ ಲಂಬಾಣಿ ಸಮುದಾಯದವರು ಪ್ರತಿಭಟನೆ ನಡೆಸಿದರು. ಸುರಿಯುತ್ತಿರುವ ಮಳೆಯಲ್ಲಿಯೇ ಫಕೀರೇಶ್ವರ ಮಠದಿಂದ ಬೃಹತ್ ಪ್ರತಿಭಟನೆ ನಡೆಸಿ, ನೆಹರು ವೃತ್ತದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ, ಶಾಸಕ ಡಾ. ಚಂದ್ರು ಲಮಾಣಿ, ಒಳಮೀಸಲಾತಿ ಬಂಜಾರ ಸಮಾಜಕ್ಕೆ ಮರಣ ಶಾಸನವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಡೆದು ಆಳುವ ನೀತಿ ಅನುಸರಿಸಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಕಿಡಿಕಾರಿದರು.