ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮೆಕ್ಕೆಜೋಳ ಖರೀದಿ ಕುರಿತ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರು ತಮ್ಮ ಅಭಿಪ್ರಾಯಗಳನ್ನು ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಸಚಿವರಾದ ಕೆ. ಹಿ. ಮುನಿಯಪ್ಪ, ಕೆ. ವೆಂಕಟೇಶ್, ಆರ್. ಬಿ. ತಿಮ್ಮಾಪುರ, ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಉಪಸ್ಥಿತರಿದ್ದರು. ಮೆಕ್ಕೆಜೋಳದ ಬೆಲೆ ಸ್ಥಿರತೆ, ಪೂರೈಕೆ ಸುಗಮತೆ ಮತ್ತು ಕೈಗಾರಿಕೆಗೆ ಅಗತ್ಯವಿರುವ ಬೆಂಬಲ ಕ್ರಮಗಳ ಬಗ್ಗೆ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸವಿಸ್ತಾರ ಚರ್ಚೆ ನಡೆಯಿತು.