ದ್ವಿಭಾಷಾ ನೀತಿ ಜಾರಿ ಗೊಳಿಸುವಂತೆ ಆಗ್ರಹಿಸಿ ಚಿತ್ರದುರ್ಗದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ರಮೇಶ್ ನೇತೃತ್ವದಲ್ಲಿ ಡಿಸಿ ಕಚೇರಿ ಬಳಿ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆ ಮಾಡಿದ್ರು. ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಹೊರಟಿರುವ ಕೇಂದ್ರ ಸರ್ಕಾರಕ್ಕೆ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿದ್ರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು.