ನಂಜನಗೂಡು: ಹಂಪಾಪುರ ಹಾಲು ಉತ್ಪಾದಕರ ಖಾತೆಗೆ ಕೂಡಲೇ ಹಣ ಜಮೆ ಮಾಡಬೇಕು: ನಗರದಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್
ಹಾಲು ಉತ್ಪಾದಕರ ಖಾತೆಗೆ ಕೂಡಲೇ ಹಣ ಜಮೆ ಮಾಡಬೇಕು ಎಂದು ನಂಜನಗೂಡಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಂಪಾಪುರ ಗ್ರಾಮದ ಹಾಲು ಉತ್ಪಾದಕರು ಒತ್ತಾಯಿಸಿದ್ದಾರೆ. ನಂಜನಗೂಡಿನ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಬುಧವಾರ ಒತ್ತಾಯಿಸಿದ ಅವರು, ಹಂಪಾಪುರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಹಾಲು ಉತ್ಪಾದಕರಿಗೆ ಹಣ ಜಮೆಯಾಗಿಲ್ಲ. ಸರ್ಕಾರದಿಂದ ನೀಡುವ ಪ್ರೋತ್ಸಾಹ ಧನ ಸರಿಯಾಗಿ ನೀಡುತ್ತಿಲ್ಲ. ಮಹಿಳಾ ಸಹಕಾರ ಸಂಘ ಆಗಿರುವುದರಿಂದ ಮಹಿಳಾ ಕಾರ್ಯದರ್ಶಿ ಕಾರ್ಯನಿರ್ವಹಿಸಬೇಕು. ಆದರೆ ಅವರ ಪತಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.