ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಆದ್ಯತೆ ಮೇರೆಗೆ ಮುಚ್ಚುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವುದು, ರಸ್ತೆ ಕತ್ತರಿಸುವಿಕೆಗೆ ಅನುಮತಿ ಪಡೆಯುವುದು, ರಸ್ತೆ ಮೇಲ್ಮೈ ದುರಸ್ತಿ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಕೇಂದ್ರ ಜಿಬಿಎ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರದ ಮುಖ್ಯ, ಉಪ-ಮುಖ್ಯ ಹಾಗೂ ವಾರ್ಡ್ ಮಟ್ಟದ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಆದ್ಯತೆ ಮೇರೆಗೆ ಮುಚ್ಚಬೇಕು.