ಸಚಿವ ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ವಿಷಯದಲ್ಲಿ ಯಾವ ಶಾಸಕರೂ ಮಾತನಾಡಬಾರದು ಎಂದು ಶಾಸಕ ಎನ್.ಎಚ್ ಕೋನರೆಡ್ಡಿ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ ಎಂದರು. ಮರು ಚುನಾವಣೆ ವಿಚಾರವಾಗಿ ಕೆ.ಎನ್.ರಾಜಣ್ಣ ಮಾತನಾಡಿದರು.