ಚಿತ್ರದುರ್ಗ: ಕಕ್ಕೇರು ಗ್ರಾಮದಲ್ಲಿ ನೂತನ ಸಿ.ಸಿ. ರಸ್ತೆ ಕಾಮಗಾರಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಚಾಲನೆ
ಚಿತ್ರದುರ್ಗ ತಾಲ್ಲೂಕಿನ ಕಕ್ಕೇರು ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ನೂತನ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದಾರೆ. ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ಬೇಗ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.