ಮಡಿಕೇರಿ: ಅಕ್ಟೋಬರ್ 31 ರಂದು ಕೊಡಗು ಜಿಲ್ಲೆಗೆ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರ ಭೇಟಿ
ಅ.31 ರಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಮತ್ತು ಸದಸ್ಯ ಸಿ. ಶಂಕರ ಅಂಕನಶೆಟ್ಟಿಪುರ ಅವರು ಕೊಡಗು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಪೌರಕಾರ್ಮಿಕರೊಂದಿಗೆ ನೇರ ಸಂವಾದ ಮತ್ತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.