ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಮಾಸೂರು ಗ್ರಾಮದಲ್ಲಿ ಸದ್ಗುರು ಸಿದ್ದಾರೂಢ ಸ್ವಾಮೀಜಿಗಳ ನೂತನ ದೇವಸ್ಥಾನ ನಿರ್ಮಿಸಲಾಗುತ್ತಿದೆ. ನೂತನ ದೇವಸ್ಥಾನ ನಿರ್ಮಾಣಕ್ಕೆ ಶಾಸಕ ಯು.ಬಿ.ಬಣಕಾರ ಅವರು ಭೂಮಿ ಪೂಜೆ ನೆರವೇರಿಸಿದರು. ತಿಪ್ಪಾಯಿಕೊಪ್ಪದ ಮೂಕಪ್ಪ ಸ್ವಾಮೀಜಿಗಳ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ಶಾಸಕ ಬಣಕಾರ ಅವರು ಭೂಮಿ ಪೂಜೆ ನೆರವೇರಿಸಿದರು. ದೇವಸ್ಥಾನದ ನಿರ್ಮಾಣಕ್ಕೆ ತಮ್ಮ ಶಾಸಕರ ಅನುದಾನದಲ್ಲಿ ಹತ್ತು ಲಕ್ಷ ರುಪಾಯಿ ಅನುದಾನ ನೀಡುವುದಾಗಿ ಹೇಳಿದರು. ಗ್ರಾಮಸ್ಥರು, ದೇವಸ್ಥಾನ ಸಮಿತಿಯವರು ಮತ್ತು ಶಾಸಕರ ಬೆಂಬಲಿಗರು ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು