ಶಿರಸಿ: ಭೈರುಂಭೆ ಸಮೀಪದ ರೆಸಾರ್ಟ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದ 19 ಜನರ ಬಂಧನ : 49 ಲಕ್ಷ ಜಪ್ತು
ಶಿರಸಿ : ಅಂದರ್-ಬಾಹರ್ ಇಸ್ಪೀಟ್ ಆಡುತ್ತಿದ್ದ ೧೯ ಜನರನ್ನು ಬಂಧಿಸಿದ ಶಿರಸಿ ಗ್ರಾಮೀಣ ಠಾಣೆ ಪೊಲೀಸರು49,50,436 ರೂ ನಗದು ಜಫ್ತುಪಡಿಸಿದ್ದಾರೆ. ಇದು ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಅತಿ ದೊಡ್ಡ ರೇಡ್ ಗಳಲ್ಲಿ ಒಂದಾಗಿದೆ. ಜಿಲ್ಲೆಯ ಶಿರಸಿ ತಾಲೂಕಿನ ಭೈರುಂಬೆ ಗ್ರಾಪಂ ವ್ಯಾಪ್ತಿಯ ಅಗಸಾಲ ಗ್ರಾಮದ ವ್ಹಿ.ಆರ್.ಆರ್ ಹೋಂ ಸ್ಟೇ ನಲ್ಲಿ ಅಂದರ್-ಬಾಹರ್ ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶಿರಸಿ ಡಿ.ಎಸ್.ಪಿ ಗೀತಾ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.