ಕಲಬುರಗಿ: ಗುಂಡುಗುರ್ತಿ ಮೊರಾರ್ಜಿ ದೇಸಾಯಿ ಶಾಲೆಯ ಪ್ರಿನ್ಸಿಪಾಲ್ ವಿರುದ್ಧ ಕ್ರಮ ಕೈಗೊಳ್ಳಬೇಕು: ನಗರದಲ್ಲಿ ಹಿಂದು ಜಾಗೃತಿ ಸೇನೆ ಮುಖಂಡ ಸ್ವಾದಿ
ಕಲಬುರಗಿ ನಗರದಲ್ಲಿ ಅ. ೧೯ ರಂದು ಸುದ್ದಿಗೋಷ್ಟಿ ಮಾಡಿ ಮಾತನಾಡಿದ ಅವರು,ಚಿತ್ತಾಪೂರ ತಾಲೂಕಿನ ಗುಂಡಗುರ್ತಿ ಗ್ರಾಮದಲ್ಲಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ ಮಾಡಿಲ್ಕ ಎಂದು ಆರೋಪಿಸಿದ ಅವರು, ತನಿಖೆ ಮಾಡಿ ಒಂದು ವಾರದಲ್ಲಿ ಪ್ರಿನ್ಸಿಪಾಲ್ ವಿರುದ್ಧ ಕ್ರಮ ಕೈಗೊಳ್ಳಬೇಕು ಇಲ್ಲ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.