ಬಳ್ಳಾರಿ: ಲಕ್ಷ್ಮೀ ಪೂಜೆ ನೆಪದಲ್ಲಿ ಲೈಂಗಿಕ ದೌರ್ಜನ್ಯ, 11 ಮಂದಿ ಬಂಧನ
ಬಳ್ಳಾರಿಯಲ್ಲಿ ಲಕ್ಷ್ಮೀ ಪೂಜೆಯ ಹೆಸರಲ್ಲಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಪಿಎಂಸಿ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಫ್ತಿ ಕಾರ್ಯಾಚರಣೆಯ ಮೂಲಕ ಈ ಅಕ್ರಮವನ್ನು ಪತ್ತೆ ಹಚ್ಚಲಾಗಿದೆ.