ರಾಯಚೂರು: ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಗುರುತಿಸುವಿಕೆ ನಿಲ್ಲಿಸಲು ಒತ್ತಾಯ
ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೆ.ಪಿ.ಎಸ್ ಮತ್ತು ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಸರ್ಕಾರದ ಕ್ರಮವನ್ನು ವೇದಿಕೆ ವಿರೋಧ ವ್ಯಕ್ತಪಡಿಸಿತು. ಶಿಕ್ಷಕರ ಖಾಲಿ ಹುದ್ದೆಗಳನ್ನು ಭರ್ತಿಮಾಡದೇ, ಮೂಲ ಸೌಕರ್ಯಗಳನ್ನು ಬಲಪಡಿಸದೇ, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡದೇ ಮಾದರಿಯಲ್ಲಿ ಶಾಲೆಗಳ ಪುನರ್ ರಚನೆ ಮಾಡಿದರೆ ರಾಜ್ಯದ ಸಾವಿರಾರು ಸರ್ಕಾರಿ ಶಾಲೆಗಳು ಮುಚ್ಚುವ ಅಪಾಯ ಎದುರಾಗಲಿದೆ ಎಂದು ವೇದಿಕೆಯ ಸಂಚಾಲಕಿ ವಿದ್ಯಾ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.