ಯಲ್ಲಾಪುರ :ಎಲ್ಲಿ ಅಸಾಧ್ಯ ಇದೆಯೋ ಅಲ್ಲಿ ಸಾಧ್ಯ ಇದೆ ಎಂದು ತೋರಿಸಿಕೊಡುವಂತಹ ,ಕೀಳರಿಮೆಯಿಂದ ಬಳಲುವಂತಹ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವದರೊಂದಿಗೆ ಅವರ ವ್ಯಕ್ತಿತ್ವ ವಿಕಸನದ ಜೊತೆಗೆ ಅವರ ಆರ್ಥಿಕ ಸಬಲೀಕರಣಕ್ಕಾಗಿ ನಡೆಯುತ್ತಿರುವ ಜ್ಞಾನ ವಿಕಾಸ ಕಾರ್ಯಕ್ರಮವು ಇಂದು ಮಹಿಳೆಯರ ಪಾಲಿಗೆ ವರದಾನವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಜಿಲ್ಲಾ ನಿರ್ದೇಶಕ ದಿನೇಶ್ ಎಂ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಭಾಭವನದಲ್ಲಿ ಜ್ಞಾನ ವಿಕಾಸ ಸೃಜನಶೀಲ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಲಾಗಿದ್ದ ಮದುಮಗಳ ಶೃಂಗಾರ ತರಬೇತಿ ಶಿಬಿರದ ಸಮಾರೋಪದಲ್ಲಿ ಮಾತನಾಡಿದರು.