ಹುಬ್ಬಳ್ಳಿ: ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿ ಲಾಭ ಗಳಿಸಬಹುದೆಂದು ನಂಬಿಸಿದ ವಂಚಕರು, ನಗರದ ವ್ಯಕ್ತಿಯೊಬ್ಬರಿಂದ 27.10 ಲಕ್ಷ ರೂ. ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಅರುಣ ಕೆ. ವಂಚನೆಗೆ ಒಳಗಾದವರು. ಫೇಸ್ಬುಕ್ ಖಾತೆ ನೋಡುತ್ತಿದ್ದಾಗ ಟ್ರೇಡಿಂಗ್ ಜಾಹೀರಾತು ನೋಡಿ ಅದರ ಮೇಲೆ ಕ್ಲಿಕ್ ಮಾಡಿದ್ದು, ನಂತರ ಅಪರಿಚಿತರು ವಾಟ್ಸ್ಆ್ಯಪ್ ಮೂಲಕ ಸಂಪರ್ಕಿಸಿ, ವಿವಿಧ ಅಪ್ಲಿಕೇಷನ್ ಲಿಂಕ್ ಕಳುಹಿಸಿದ್ದಾರೆ. ನಂತರ ವಿವಿಧ ಖಾತೆಗಳಿಂದ 27.10 ಲಕ್ಷ ರೂ. ವರ್ಗಾಯಿಸಿಕೊಂಡಿದ್ದಾರೆ. ನಂತರ ದೂರುದಾರರಿಗೆ ರೇರಸಿಪ್ರೋ ಎಂಬ ನಕಲಿ ಆ್ಯಪ್ನಲ್ಲಿ ಲಾಭ ತೋರಿಸುತ್ತ ಬಂದು ವಂಚಿಸಿದ್ದಾರೆ ಎಂದು ಸಿಇಎನ್ ಕ್ರೈಂ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.