ಜೇವರ್ಗಿ: ನೇಲೊಗಿ ಪೊಲೀಸ್ ಠಾಣೆಗೆ ಎಸ್ಪಿ ಅಡ್ಡೂರು ಶ್ರೀನಿವಾಸುಲು ದಿಢೀರ ಭೇಟಿ
ಕಲಬುರಗಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಅಡ್ಡೂರು ಶ್ರೀನಿವಾಸುಲು ಅವರು ನೇಲೊಗಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ನಡೆಸಿದರು. ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಪರಿಶೀಲಿಸಿದ ಅವರು, ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಕುಂದುಕೊರತೆಗಳನ್ನು ಆಲಿಸಿದರು. ಪೊಲೀಸ್ ಸಿಬ್ಬಂದಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕೆಂದು ಸೂಚನೆ ನೀಡಿ, ಜನಸಾಮಾನ್ಯರ ವಿಶ್ವಾಸವನ್ನು ಗಳಿಸುವ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಲಹೆ ನೀಡಿದರು ಎಂದು ಶನಿವಾರ ಒಂಭತ್ತು ಗಂಟೆಗೆ ಪೊಲೀಸರು ಮಾಹಿತಿ ನೀಡಿದ್ದಾರೆ.