ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನವನ್ನು ಆಚರಿಸಲಾಯಿತು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಅಂಬೇಡ್ಕರ್ ಅವರು ಇಡೀ ಜಗತ್ತು ಮೆಚ್ಚುವ ಸಂವಿಧಾನವನ್ನು ರಚಿಸಿದ್ದಾರೆ. ಈ ಮೂಲಕ ಭಾರತ ದೇಶದ ಆಡಳಿತ ವ್ಯವಸ್ಥೆಗೆ ಹೊಸ ಆಯಾಮ ತಂದು ಕೊಟ್ಟಿದ್ದಾರೆ. ಹೀಗಾಗಿ ನಾವೆಲ್ಲರೂ ಅಂಬೇಡ್ಕರ್ ಅವರನ್ನು ಸದಾ ಸ್ಮರಿಸುವ ಅಗತ್ಯವಿದೆ ಎಂದರು.