ಶಿವಮೊಗ್ಗ: ಮೋದಿ ಮತ್ತು ಹಿಂದುತ್ವದ ಕುರಿತು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಸಾಗರದಲ್ಲಿ ಬಿಜೆಪಿ ಪ್ರತಿಭಟನೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದುತ್ವದ ಕುರಿತು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಯನ್ನ ಖಂಡಿಸಿ ಸಾಗರ ತಾಲೂಕು ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.ಮಂಗಳವಾರ ಸಾಗರ ತಾಲೂಕು ಉಪ ವಿಭಾಗ ಅಧಿಕಾರಿಯ ಕಚೇರಿ ಮುಂಭಾಗ ಬಿಜೆಪಿ ಜಿಲ್ಲಾಧ್ಯಕ್ಷ ಟಿಡಿ ಮೇಘರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರವನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು. ಅಲ್ಲದೆ ಹಿಂದುತ್ವ ಹಾಗೂ ಪ್ರಧಾನಿ ಮೋದಿ ಅವರ ಕುರಿತು ರಾಹುಲ್ ಗಾಂಧಿಯವರ ಹೇಳಿಕೆ ಖಂಡದ ರಾಹುಲ್ ಗಾಂಧಿ ತಮ್ಮ ಹೇಳಿಕೆಯನ್ನು ಹಿಂದೆ ತೆಗೆದುಕೊಳ್ಳಬೇಕು ಲೋಕಸಭೆಯ ವಿರುದ್ಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಹ ಪ್ರತಿಭಟನಾಕಾರರು ಆಗ್ರಹಿಸಿದರು.