ಹುಬ್ಬಳ್ಳಿ ನಗರ: ನಗರದ ಇಂದಿರಾಗಾಜಿನ ಮನೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ
ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿ ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಹು-ಧಾ ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಇತರ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜರುಗಿದ "ವಿಶ್ವ ವಿಕಲಚೇತನರ ದಿನಾಚರಣೆ" ಕಾರ್ಯಕ್ರಮವನ್ನು ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಹಾಗೂ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಮಹಾಪೌರರಾದ ಶ್ರೀಮತಿ ಜ್ಯೋತಿ ಪಾಟೀಲ, ಉಪ ಮಹಾಪೌರರಾದ ಸಂತೋಷ ಚವ್ಹಾಣ, ವಿಪಕ್ಷ ನಾಯಕರಾದ ಇಮ್ರಾನ ಎಲಿಗಾರ, ಆಯುಕ್ತರಾದ ಡಾ. ರುದ್ರೇಶ ಘಾಳಿ, ಪಾಲಿಕೆಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.