ಚಾಮರಾಜನಗರ: ಲಕ್ಷ್ಮೀಪುರದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ಸಿ.ಸಿ ರಸ್ತೆ, ಚರಂಡಿ ಅಭಿವೃದ್ದಿ ಕಾಮಗಾರಿಗೆ ಶಾಸಕ ಪುಟ್ಟರಂಗಶೆಟ್ಟಿಯಿಂದ ಗುದ್ದಲಿಪೂಜೆ
ಚಾಮರಾಜನಗರ ತಾಲೂಕಿನ ಬಡಗಲಪುರ ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಎಸ್ಸಿಪಿ ಯೋಜನೆಯಡಿ ಪರಿಶಿಷ್ಟರ ಬೀದಿಯಲ್ಲಿ ಸಿಮೆಂಟ್ ಕಾಂಕ್ರೀಟ್ರಸ್ತೆ ಹಾಗೂ ಚರಂಡಿ ಅಭಿವೃದ್ದಿ ಕಾಮಗಾರಿಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು. ಇದೇ ವೇಳೆ ಮಾತನಾಡಿ, ಜನರ ಸುಗಮ ಸಂಚಾರಕ್ಕೆ ರಸ್ತೆ ಎಷ್ಟು ಮುಖ್ಯವೋ ಹಾಗೆಯೇ ಕೊಳಚೆ ನೀರು ರಸ್ತೆಯಲ್ಲಿ ಹರಿಯದಂತೆ ಮಾಡಲು ಸುಸಜ್ಜಿತ ಚರಂಡಿಯ ನಿರ್ಮಾಣದ ಅಗತ್ಯವಿದೆ. ಲಕ್ಷ್ಮೀಪುರದಲ್ಲಿ ಎಸ್ಸಿಪಿ ಯೋಜನೆಯಡಿ ಪರಿಶಿಷ್ಟರ ಬೀದಿಯಲ್ಲಿಸಿಮೆಂಟ್ ಕಾಂಕ್ರೀಟ್ರಸ್ತೆ ಹಾಗೂ ಚರಂಡಿ ಅಭಿವೃದ್ದಿ ಕಾಮಗಾರಿಗೆ ಸಮಾಜಕಲ್ಯಾಣ ಇಲಾಖೆಯಿಂದ ೫೦ಲಕ್ಷ ರೂ.ಮಂಜೂರಾಗಿದೆ ಎಂದರು