ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾ ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ. ಸಂಜೆ 4 ಗಂಟೆ ಸುಮಾರಿಗೆ ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಗಳು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಸಭೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ಕೊಟ್ಟರು.