ಚಿತ್ರದುರ್ಗ: ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಸಂಬಂಧಿಸಿದ ವೈದ್ಯಕೀಯ ದಾಖಲಾತಿಗಳನ್ನು ಎರಡು ವರ್ಷಗಳ ಕಾಲ ನಿರ್ವಹಣೆ ಮಾಡಬೇಕು: ನಗರದಲ್ಲಿ ಡಿಸಿ.ವೆಂಕಟೇಶ್
ಚಿತ್ರದುರ್ಗ:-ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ ಅಧಿನಿಯಮ) ಕುರಿತು ಜಿಲ್ಲಾ ಮಟ್ಟದ ಪ್ರಾಧಿಕಾರದ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾಧಿಕಾರಿ ವೆಂಕಟೇಶ್ ಮಾತನಾಡಿ,2007ರ ಕೆ.ಪಿ.ಎಂ.ಇ ಕಾಯ್ದೆ ಪ್ರಕಾರ ಖಾಸಗಿ ಆಸ್ಪತ್ರೆಗಳು ಒಳರೋಗಿಗಳಿಗೆ ನೀಡಿದ ಚಿಕಿತ್ಸೆಯ ದಾಖಲೆಗಳನ್ನು ಎರಡು ವರ್ಷಗಳ ಕಾಲ ನಿರ್ವಹಣೆ ಮಾಡುವುದು ಕಡ್ಡಾಯವಾಗಿದೆ. ತಪ್ಪದೇ ಇದರ ಪಾಲನೆಯಾಗಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು. ಖಾಸಗಿ ವೈದ್ಯಕೀಯ ಸಂಸ್ಥೆಯು ತನ್ನ ರಕ್ಷಣೆಯಲ್ಲಿರುವ ರೋಗಿಗಳಿಗೆ ಸಂಬಂಧಿಸಿದ ವೈದಕೀಯ ಸಂಗ್ರಹಿಸಿಡಬೇಕು ಎಂದರು.