ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಕಾರ್ಯಾಗಾರದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿ ಸುತ್ತಮುತ್ತ ಅಲಂಕಾರದ ಉದ್ದೇಶದಿಂದ ರಸ್ತೆಯ ಕಂಬಗಳಿಗೆ ಬಿಜೆಪಿ ಧ್ವಜಗಳನ್ನು ಕಟ್ಟಿದ್ದರು.ಆದರೆ, ಮಧ್ಯರಾತ್ರಿ ಕೆಲ ಕಿಡಿಗೇಡಿಗಳು ಕಂಬಗಳಿಗೆ ಕಟ್ಟಿದ್ದ ಬಿಜೆಪಿ ಧ್ವಜಗಳನ್ನು ಹರಿದು ಹಾಕಿದ್ದಾರೆ. ಧ್ವಜಗಳನ್ನು ಕಿತ್ತೆಸೆಯುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು. ಕಿಡಿಗೇಡಿಗಳ ವಿರುದ್ಧ ಕ್ರಮಕೊಳ್ಳಬೇಕೆಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದೂರು ನೀಡಿದ್ದಾರೆ.