ಬೆಂಗಳೂರಿನ ಕಂಠೀರವ ಕ್ರೀಡಾಂಗಣದ ಕರ್ನಾಟಕ ಒಲಂಪಿಕ್ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆಯ ಸಹಯೋಗದಲ್ಲಿ ಜನವರಿ 16ರಿಂದ 22ರವರೆಗೆ ತುಮಕೂರಿನಲ್ಲಿ ನಡೆಯಲಿರುವ ‘ಕರ್ನಾಟಕ ಕ್ರೀಡಾಕೂಟ 2025-26’ರ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷರಾದ ಡಾ. ಕೆ. ಗೋವಿಂದರಾಜ್, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ. ಜಯಚಂದ್ರ, ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ಒಲಂಪಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಟಿ. ಅನಂತರಾಜ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಚೇತನ್ ಆರ್., ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್