ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಜಿಂಕೆ ಚರ್ಮ ಹಾಗೂ ಕಾಡುಹಂದಿ ಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ತಾಲೂಕಿನ ಬಾಳೆಕೊಪ್ಪ ಗ್ರಾಮದ ಕನಕಪ್ಪ ದುರ್ಗಪ್ಪ ಮಾದರ್, ಪರಶುರಾಮ್ ಕನಕಪ್ಪ ಮಾದರ್ ಹಾಗೂ ಸೊರಬ ತಾಲೂಕಿನ ಕೋಡಿಕೊಪ್ಪ ಗ್ರಾಮದ ಸುರೇಶ ದೇವಪ್ಪ, ಶಿವಪುತ್ರಪ್ಪ ಹನುಮಂತಪ್ಪ ಮತ್ತು ಉಮೇಶ ಗುಡ್ಡಪ್ಪ ಎಂದು ಗುರುತಿಸಲಾಗಿದೆ.