ಕಲಬುರಗಿ: ನವೆಂಬರ್ 1 ರಂದು ಅದ್ಧೂರಿ ರಾಜ್ಯೋತ್ಸವ ಆಚರಣೆ, ಸಿದ್ಧತೆ ಜೋರು
ಕಲಬುರಗಿಯಲ್ಲಿ ನವೆಂಬರ್ 1 ರಂದು ನಡೆಯಲಿರುವ ರಾಜ್ಯೋತ್ಸವ ಆಚರಣೆಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಗಂಜ್ ಪ್ರದೇಶದ ನಗರೇಶ್ವರ ಶಾಲಾ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ವಿಶೇಷ ಕ್ರಮ ಕೈಗೊಳ್ಳಲಾಗಿದೆ.