ಕಾರವಾರ: ನಗರದ ರಾಧಾಕೃಷ್ಣ ದೇವಸ್ಥಾನದಲ್ಲಿ ಕಳ್ಳತನ - ದೇವರ ಬೆಳ್ಳಿ ಆಭರಣಗಳು ಕಳವು
ನಗರದ ಪ್ರಸಿದ್ಧ ರಾಧಾಕೃಷ್ಣ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವರ ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿದೆ. ಕಳ್ಳರು ದೇವಸ್ಥಾನದ ಮೇಲ್ಛಾವಣಿಯನ್ನು ತೆಗೆದು ಒಳನುಗ್ಗಿ ದೇವರ ವಿಗ್ರಹದ ಅಲಂಕಾರಕ್ಕೆ ಬಳಸಲಾಗುತ್ತಿದ್ದ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದಾರೆ. ಈ ಕಳ್ಳತನದ ಘಟನೆಯು ಮಂಗಳವಾರ ಬೆಳಗ್ಗೆ ದೇವಸ್ಥಾನದ ಬಾಗಿಲು ತೆರೆದಾಗ ಬೆಳಕಿಗೆ ಬಂದಿದೆ. ಪೊಲೀಸರು ಮಂಗಳವಾರ ಮಧ್ಯಾಹ್ನ 1ಕ್ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.