ಶಿಕಾರಿಪುರ: ಗ್ಯಾರಂಟಿಯ ಹೆಸರಿನಲ್ಲಿ ರಾಜ್ಯದ ಖಜಾನೆಯನ್ನು ಕಾಂಗ್ರೆಸ್ ಸರ್ಕಾರ ಕಾಲಿ ಮಾಡಿದೆ ತಾಲೂಕಿನ ಮಾರ್ವಳ್ಳಿಯಲ್ಲಿ ಬಿ ವೈ ವಿಜಯೇಂದ್ರ ಹೇಳಿಕೆ
ಶಿಕಾರಿಪುರ ತಾಲೂಕಿನ ಮಾರವಳ್ಳಿಯಲ್ಲಿ ಭಾನುವಾರ ಮಾಧ್ಯಹ್ನ 3 ಗಂಟೆಗೆ ಶಾಸಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಗ್ಯಾರಂಟಿಯ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆಯನ್ನು ಖಾಲಿ ಮಾಡಿದೆ ಎಂದು ಆರೋಪಿಸಿದರು ತಾಲೂಕಿನ ಮಾರವಳ್ಳಿ ಗ್ರಾಮದಲ್ಲಿ ಪ್ರವಾಸವನ್ನು ಕೈಗೊಂಡು ಮಾತನಾಡಿದ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಬಡವರಿಗೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿದೆ ಹಾಗೂ ಎಲ್ಲ ರೀತಿಯ ತೆರಿಗೆಗಳನ್ನು ಹೆಚ್ಚಿಗೆ ವಸೂಲಿ ಮಾಡಲಾಗುತ್ತಿದೆ ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅದಕ್ಕೆ ತಕ್ಕ ಉತ್ತರ ಸಿಗಲಿದೆ ಎಂದರು ಈ ಸಂದರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಇದ್ದರು.