ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದ ಅಧ್ಯಕ್ಷರಾಗಿ ಪೂರ್ಣಿಮಾ ಯತೀಶ್ ರೈ ಪುನರಾಯ್ಕೆ
ಯಕ್ಷಧ್ರುವ ಪಟ್ಲ ಫೌಂಡೇಶನ್ ಕೇಂದ್ರೀಯ ಮಹಿಳಾ ಘಟಕದ ಅಧ್ಯಕ್ಷರಾಗಿ ಪೂರ್ಣಿಮಾ ಯತೀಶ್ ರೈ ಮರು ಆಯ್ಕೆಯಾಗಿದ್ದಾರೆ. ಸುರತ್ಕಲ್ಲಿನಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಇದೇ ವೇಳೆ ದಶಮಾನೋತ್ಸವದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.