ಚಳ್ಳಕೆರೆ:-ತಾಲೂಕಿನ ದೊಡ್ಡಉಳ್ಳಾರ್ತಿ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿದ ಕೃತ್ಯಕ್ಕೆ ಸಂಬಂಧಿಸಿದಂತೆ ಹಾಗೂ ಸುತ್ತಮುತ್ತಲಿನ ಹಳ್ಳಿಯಲ್ಲಿ ಕಳ್ಳರ ಹಾವಳಿಯ ಬಗ್ಗೆ ಹೆಚ್ಚುತ್ತಿರುವ ಹಿನ್ನೆಯಲ್ಲಿ ಗ್ರಾಮದಲ್ಲಿ ಸ್ಥಳೀಯ ಗ್ರಾಪನಿಂದ ಸಿಸಿ ಟಿವಿ ಅಳವಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಾಗುತ್ತಿರುವ ಕಳ್ಳತನ ಹಾಗೂ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸಿ. ಸಿ. ಕ್ಯಾಮೆರಾ ಕಣ್ಣಾವಲು ವ್ಯವಸ್ಥೆಯನ್ನು ಅಳವಡಿಸಲಾಗಿದೆ.