ಗದಗ: ಸಂವಿಧಾನ ಜಾರಿಗೆ ಮೊದಲೇ ಕುರುಬರ ಪತ್ತಿನ ಸಹಕಾರ ಸಂಘ ಸ್ಥಾಪನೆ: ನಗರದಲ್ಲಿ ಸಿಎಂ ಸಿದ್ದರಾಮಯ್ಯ
Gadag, Gadag | Jun 3, 2025 ಗದಗ: ಅಂಬೇಡ್ಕರ್ ನೀಡಿರುವ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಎಲ್ಲರೂ ಪಾಲಿಸಿಬೇಕು. ಸಂವಿಧಾನ ಜಾರಿಯಾಗಿ ೭೫ ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತ ಪಡೆಸಿದರು. ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಮಂಗಳವಾರ ದಿ.ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನೂರು ವರ್ಷಗಳ ಹಿಂದೆಯೇ ಕುರುಬ ಸಮಾಜವನ್ನು ಸಂಘಟಿಸಿ ಸಹಕಾರ ಸಂಘ ಸ್ಥಾಪಿಸಿದ್ದು ಅತ್ಯಂತ ಮುಂದಾಲೋಚನೆಯ ಸಾಮಾಜಿಕ ನ್ಯಾಯದ ಕಾರ್ಯವಾಗಿದೆ. ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ದೇಶದ ಹಿಂದುಳಿ