ಬಿಹಾರ್ ಮುಖ್ಯಮಂತ್ರಿ ನಿತೀಶ್ಕುಮಾರ್ ಅವರು ಆಯುಷ್ ಮಹಿಳಾ ವೈದ್ಯರ ಪ್ರಮಾಣಪತ್ರ ವಿತರಣೆ ಸಂದರ್ಭದಲ್ಲಿ ಮಹಿಳೆಯ ಧಾರ್ಮಿಕ ವಸ್ತ್ರವಾದ ಹಿಜಾಬನ್ನು ಸಾರ್ವಜನಿಕವಾಗಿ ವೇದಿಕೆಯಲ್ಲಿ ಎಳೆದು ಅವಮಾನಿಸಿರುವುದನ್ನು ಖಂಡಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ವಿಭಾಗದ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ನಿತೀಶ್ಕುಮಾರ್ ಅವರು ಸಾರ್ವಜನಿಕ ವೇದಿಕೆಯಲ್ಲಿಯೇ ಧಾರ್ಮಿಕ ವಸ್ತ್ರ ಹಿಜಾಬನ್ನು ಕೈಯಿಂದ ಎಳೆದು ಅವಮಾನಿಸಿದ್ದಾರೆ. ಈ ಘಟನೆ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಮತ್ತು ಆತಂಕಕ್ಕೆ ಕಾರಣವಾಗಿದೆ.