ಶಿವಮೊಗ್ಗ: ನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ಯುವ ಕಾಂಗ್ರೆಸ್ನ ಕಾರ್ಯಕರ್ತರು ಪ್ರತಿಭಟನೆ ಮಾಡುವ ಮೂಲಕ ಆಚರಿಸಿದ್ದಾರೆ.ದೇಶದಲ್ಲಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿ ಕೇಂದ್ರದಲ್ಲಿ ಮೂರು ಬಾರಿ ಅಧಿಕಾರದ ಚುಕ್ಕಾಣೆ ಹಿಡಿದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಎರಡು ಅವಧಿ ಮುಗಿಸಿ ಮೂರನೇ ಅವಧಿಯ ವರ್ಷದ ಸಂಭ್ರಮಾಚರಣೆಯ ಆಚರಿಸಿದರು ಒಂದೇ ಒಂದು ಉದ್ಯೋಗ ಸೃಷ್ಟಿ ಮಾಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ತರಕಾರಿ,ಹಣ್ಣು,ಟೀ ಮಾರುವ ಮೂಲಕ ಬುಧವಾರ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ನ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ,ನಗರಾಧ್ಯಕ್ಷ ಚರಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.