ಶಿವಮೊಗ್ಗ: ದೈಹಿಕ ಶಿಕ್ಷಕರ ಕೊರತೆ ಖಂಡಿಸಿ ನಗರದಲ್ಲಿ ಶಾಲಾ ಮುಂಭಾಗ ಪೋಷಕರ ಪ್ರತಿಭಟನೆ
ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕರ ಕೊರತೆ ಖಂಡಿಸಿ ಪೋಷಕರು ಹಾಗೂ ಎಸ್ಡಿಎಂಸಿ ಸದಸ್ಯರು ಶಾಲೆಯ ಮುಂಬಾಗ ಪ್ರತಿಭಟನೆ ನಡೆಸಿರುವ ಘಟನೆ ಗುರುವಾರ ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಶಾಲೆ ಬಳಿ ನಡೆದಿದೆ. ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ದುರ್ಗಿಗುಡಿ ಸರ್ಕಾರಿ ಶಾಲೆಯಲ್ಲಿ ಇದುವರೆಗೂ ದೈಹಿಕ ಶಿಕ್ಷಕರನ್ನ ನೇಮಕ ಮಾಡಿಲ್ಲ ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೋಷಕರು ಆಕ್ರೋಶವನ್ನು ವ್ಯಕ್ತಪಡಿಸಿದರು.