ಸಿಜೆಐ ಗವಾಯಿ ಮೇಲೆ ಶೂ ಎಸೆತ ಖಂಡಿಸಿ ಮಾದಿಗ ದಂಡೋರ ಸಮಿತಿಯಿಂದ ಅ. ೨೫ ಬೆಂಗಳೂರು ಚಲೋ ಕೋಲಾರ: ಸಿಜೆಐ ಗವಾಯಿ ಮೇಲೆ ಶೂ ಎಸೆತ ಖಂಡಿಸಿ ಮಾದಿಗ ದಂಡೋರ ಸಮಿತಿ ಇದೇ ಅಕ್ಟೋಬರ್ ೨೫ರಂದು ಬೆಂಗಳೂರು ಚಲೋ ಕಾರ್ಯಕ್ರಮ ಆಯೋಜಿಸಿದ್ದು ಜಿಲ್ಲೆಯ ಎಲ್ಲಾ ಮಾದಿಗ ಸಮುದಾಯದ ಮುಖಂಡರು, ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನ್ಯಾಯಕ್ಕಾಗಿ ಐಕ್ಯತೆ ಪ್ರದರ್ಶಿಸಬೇಕು ಎಂದು ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವರಾಜ್ ಮನವಿ ಮಾಡಿದರು. ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆದಿರುವುದನ್ನು ಖಂಡಿಸಿ, ಅ.೨೫ರ ಶನಿವಾರದಂದು ಬೆಂಗಳೂರಿನ ಫ್ರೀಡಂ ಪಾರ್ಕ್