ಗೋಕಾಕ: ಪಟ್ಟಣದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ
ಪಟ್ಟಣದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ. ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಜೋಕಾನಟ್ಟಿ ಗ್ರಾಮದ ಶಿಲ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ರಂಗಾಪೂರ ಗ್ರಾಮದ ಮಲ್ಲಿಕಾರ್ಜುನ ಭೀಮಪ್ಪ ಕಲ್ಕೂರ ಅವರು ಭಾನುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಖಾನೆಯ ಸಭಾಗೃಹದಲ್ಲಿ ನಡೆದ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಈ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿ ಎಸ್. ಬಿ. ಬಿರಾದಾರ ಪಾಟೀಲ ಪ್ರಕಟಿಸಿದ್ದಾರೆ