ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಇಂದು ಬಸವರಾಜ ಹೊರಟ್ಟಿ ಅಭಿನಂದನಾ ಸಮಿತಿ ಹುಬ್ಬಳ್ಳಿ ಇವರ ವತಿಯಿಂದ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಆಯೋಜಿಸಲಾಗಿದ್ದ ಸತತವಾಗಿ 8 ಬಾರಿ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಿಂದ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರಾಗಿ ವಿಶ್ವ ದಾಖಲೆ ನಿರ್ಮಿಸಿ 45 ನೇ ವರ್ಷ ಪೂರೈಸಿದ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರಿಗೆ ಗೌರವ ಸನ್ಮಾನ ಸಮಾರಂಭ ದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿದರು. ಈ ವೇಳೆ ಕಾರ್ಯಕ್ರಮದ ಕೇಂದ್ರ ಬಿಂದು ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ,ಸಂಸದರಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಸಚಿವರಾದ ಸಂತೋಷ್ ಲಾಡ್, ಎಚ್.ಕೆ.ಪಾಟೀಲ್, ಸ್ಪೀಕರ್ ಯು.ಟಿ.ಖಾದರ್, ಸಚಿವರುಗಳು, ಶಾಸಕರುಗಳು, ಪ್ರಮುಖರು ಸೇರಿ