ನಂಜನಗೂಡು: ಜಾನುವಾರುಗಳಿಗೆ ಮನೆ ಮನೆಗೆ ಮೇವು ಪೂರೈಕೆ ಮಾಡಿ: ಪಟ್ಟಣದಲ್ಲಿ ರೈತ ಸಂಘ, ಹಸಿರು ಸೇನೆ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಆಗ್ರಹ
ಬೇಸಿಗೆಯ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವು ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸರ್ಕಾರ ಮನೆ ಮನೆಗಳಿಗೆ ಮೇವು ಪೂರೈಕೆ ಮಾಡುವ ಕೆಲಸ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಒತ್ತಾಯಿಸಿದ್ದಾರೆ. ಪಟ್ಟಣದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಅಭ್ಯರ್ಥಿಗಳು ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ. ಆದರೆ, ಚುನಾವಣೆ ಸಂದರ್ಭದಲ್ಲಿ ಸರ್ಕಾರಗಳು ರೈತರನ್ನು ಮರೆತಿವೆ. ಈಗಾಗಲೇ ತಾಲ್ಲೂಕಿನಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲ. ದನಕರುಗಳಿಗೆ ಮೇವಿಲ್ಲ ಎಂದರು.