ಭಟ್ಕಳ: ಮುರುಡೇಶ್ವರದಲ್ಲಿ ಟ್ರ್ಯಾಫಿಕ್ ಸಮಸ್ಯೆಗಳನ್ನು ಪರಿಶೀಲನೆ ಮಾಡಿದ ಎಸ್ಪಿ ದೀಪನ್
ಪ್ರವಾಸಿತಾಣವಾಗಿರುವ ಮುರುಡೇಶ್ವದಲ್ಲಿ ಟ್ರ್ಯಾಫಿಕ್ ಸಮಸ್ಯೆ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ. ಎನ್ ಅವರು ರವಿವಾರ ಮಧ್ಯಾಹ್ನ 12ಕ್ಕೆ ಮುರುಡೇಶ್ವರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಡಲತೀರ ಬಳಿ ಇರುವ ಪಾರ್ಕಿಂಗ್ ವ್ಯವಸ್ಥೆಯ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ, ಟ್ರ್ಯಾಫಿಕ್ ಸಮಸ್ಯೆ ಸೃಷ್ಟಿಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.