ಚಾಮರಾಜನಗರ ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮದ ಜಮೀನಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಕಳವಳಕಾರಿ ಘಟನೆ ನಡೆದಿದೆ. ಗ್ರಾಮದ ಅರ್ಚಕ ಶಿವಮಲ್ಲಪ್ಪ ಎಂಬವರ ಮೇಲೆ ಚಿರತೆ ದಾಳಿ ಮಾಡಿದ್ದು, ಬೆನ್ನು, ಕೈ ಭಾಗಕ್ಕೆ ಸಣ್ಣ ಪುಟ್ಟ ಗಾಯಗಳಾಗಿ ಪ್ರಾಣಪಾಯದಿಂದ ಪಾರಾಗಿದ್ದು ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ಅರಣ್ಯ ಇಲಾಖೆ ಸಿಬ್ಬಂದಿ ದಾಖಲಿಸಿದ್ದಾರೆ. ಘಟನೆಯ ಸ್ಥಳಕ್ಕೆ ಸಿಬ್ಬಂದಿಯನ್ನು ನಿಯೋಜಿಸಿ ಚಿರತೆಯನ್ನು ಸೆರೆ ಸೆರೆಹಿಡಿಯಲು ಕ್ರಮ ಕೈಗೊಳ್ಳಲಾಗುವುದು ಎಂದು ಚಾ.ನಗರ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಚಂದ್ರಕುಮಾರ್ ಮಾಹಿತಿ ನೀಡಿದ್ದಾರೆ.