ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ವಿಳಂಬಿಸಿ ಶಿವಮೊಗ್ಗ ನಗರದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ
ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ನೀಡಲು ವಿಳಂಬ ಮಾಡುತ್ತಿರುವುದನ್ನ ಖಂಡಿಸಿ ಹಾಗೂ ವಿದ್ಯಾರ್ಥಿ ವೇತನವನ್ನು ಕೂಡಲೇ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬುಧವಾರ ಪ್ರತಿಭಟನೆಯನ್ನು ನಡೆಸಲಾಯಿತು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಗ್ರಾಮೀಣ ಬಡ ಮತ್ತು ಪ್ರತಿಭಾವಂತ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಉದ್ದೇಶದಿಂದ ನಗರ ಪ್ರದೇಶಕ್ಕೆ ಬಂದಿದ್ದಾರೆ ಕಾಲೇಜ್ ಮತ್ತು ಪ್ರೌಢಶಾಲೆಗಳು ಈಗಾಗಲೇ ಆರಂಭವಾಗಿದೆ ಆದರೂ ಕೂಡ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ ಸಿಕ್ಕಿರುವುದಿಲ್ಲ. ಕೂಡಲೇ ಸರ್ಕಾರ ಹಾಸ್ಟೆಲ್ ಪ್ರವೇಶಾತಿ ನೀಡಬೇಕು.ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಹಾಸ್ಟೆಲ್ ಗಳನ್ನು ತೆರೆಯಬೇಕು ಎಂದು ಆಗ್ರಹಿಸಿದರು.