ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ ಗ್ರಾಮದಲ್ಲಿ ಎಸ್ ಸಿಪಿ ಯೋಜನೆಯಡಿಯಲ್ಲಿ 25 ಲಕ್ಷ ರೂ ವೆಚ್ಚದಲ್ಲಿ ಪರಿಶಿಷ್ಟ ಸಮುದಾಯದ ಬಡಾವಣೆಯ ರಸ್ತೆಗೆ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕರಾದ ಗಣೇಶ್ ಪ್ರಸಾದ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯನ್ನು ಮಾಡಬೇಕೆಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ನಂಜಪ್ಪ, ಹಾಗೂ ಗ್ರಾಮದ ಯಜಮಾನರು, ಮುಖಂಡರು ಭಾಗವಹಿಸಿದ್ದರು