ಮಂಗಳೂರು: ಬಿ.ಸಿ.ರೋಡ್ ಫ್ಲೈಓವರ್ನಿಂದ ಬಿದ್ದ ಬೈಕ್ ಸವಾರ; ತಪ್ಪಿದ ಭಾರಿ ಅನಾಹುತ!
ಬಿ.ಸಿ.ರೋಡ್ ಫ್ಲೈಓವರ್ನಿಂದ ಬೈಕ್ ಸವಾರ ಕೆಳಕ್ಕೆ ಬಿದ್ದು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಸವಾರ ಹೆಲ್ಮೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ 2016ರಲ್ಲಿ ಇದೇ ಸ್ಥಳದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಘಟನೆ ನಡೆದಿತ್ತು.