ಪಾವಗಡ: ಬುಡಕಟ್ಟು ಸಮುದಾಯದ ಬೆಳವಣಿಗೆಗೆ ಶಿಕ್ಷಣವೇ ದಾರಿ: ಪಟ್ಟಣದಲ್ಲಿ ಬಸವರಮಾನಂದ ಸ್ವಾಮೀಜಿ
ಬುಡಕಟ್ಟು ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಮುಖ್ಯ. ಮೌಢ್ಯತೆ, ಕಂದಾಚಾರದಿಂದ ದೂರವಿದ್ದು ಮಕ್ಕಳ ವಿದ್ಯಾಭ್ಯಾಸಕ್ಕೆ ಪೋಷಕರು ಹೆಚ್ಚಿನ ಆದ್ಯತೆ ನೀಡಬೇಕು” ಎಂದು ವಣಕಲ್ಲು ಮಠದ ಪೀಠಾಧ್ಯಕ್ಷ ಶ್ರೀ ಬಸವರಮಾನಂದ ಸ್ವಾಮೀಜಿ ಕರೆ ನೀಡಿದರು. ಪಟ್ಟಣದ ಎಸ್.ಎಸ್.ಕೆ. ಭವನದಲ್ಲಿ ಕಾಡುಗೊಲ್ಲ ಯುವಸೇನೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಮೊಬೈಲ್, ಚಟಗಳಿಂದ ದೂರವಿದ್ದು ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಸತ್ಯಭಾಮ ಸಮುದಾಯದಲ್ಲಿ ಬಾಲ್ಯವಿವಾಹ ತಡೆದು,