ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೇರೂರು ಗ್ರಾಮದ ಶ್ರೀ ಗುರು ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ಕಳ್ಳರು ದೇವಸ್ಥಾನದಲ್ಲಿದ್ದ ಚಿನ್ನದ ಆಭರಣಗಳು ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಂಗಳವಾರ ಆರು ಗಂಟೆಗೆ ಮಾಹಿತಿ ಲಭ್ಯವಾಗಿದೆ.