ವಿರಾಜಪೇಟೆ: ಶಾಸಕ ಎ.ಎಸ್. ಪೊನ್ನಣ್ಣ ಅವರಿಂದ ಆಯುಧ ಪೂಜೆ ಆಚರಣೆ
ವಿರಾಜಪೇಟೆಯಲ್ಲಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ತಮ್ಮ ಗೃಹ ಕಚೇರಿಯಲ್ಲಿ ಆಯುಧ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದ್ದಾರೆ. ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಜನತೆಗೆ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಕೋರಿದರು.