ದೇವದುರ್ಗ: ದೇವದುರ್ಗ : ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ
ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು 7 ಗಂಟೆ ಸುಮಾರಿಗೆ ಗೂಗಲ್ ಗ್ರಾಮದ ಹತ್ತಿರ ಕೃಷ್ಣಾ ನದಿಯಿಂದ ಟ್ರ್ಯಾಕ್ಟರ್ನಲ್ಲಿ ಮರಳನ್ನು ಅಕ್ರಮವಾಗಿ ತುಂಬಿಕೊಂಡು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಚಾಲಕನನ್ನು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಮರಳು ಸಾಗಿಸುತ್ತಿರುವುದು ತಿಳಿದುಬಂದ ಕಾರಣ, ಪಂಚರ ಸಮ್ಮುಖದಲ್ಲಿ ಟ್ರ್ಯಾಕ್ಟರ್ ಸಹಿತ ಮರಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗಿದೆ.