ಭದ್ರಾವತಿ: ಭದ್ರಾವತಿಯಲ್ಲಿ ನೂತನ ಆಸ್ಪತ್ರೆ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ
ಭದ್ರಾವತಿಯಲ್ಲಿ ನೂತನವಾಗಿ ಆರಂಭಗೊಂಡ ಎಲ್ ಎಲ್ ಎನ್ ಡೇ ಕೇರ್ ಆಸ್ಪತ್ರೆಯನ್ನ ಸಂಸದ ಬಿ.ವೈ.ರಾಘವೇಂದ್ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ಉದ್ಘಾಟಿಸಿದರು. ಈ ವೇಳೆ ಮಾತಾನಡಿದ ಸಂಸದ ಬಿ.ವೈ.ರಾಘವೇಂದ್ರ ತಾಲ್ಲೂಕಿನ ಜನತೆಗೆ ಉತ್ತಮ ಆರೋಗ್ಯ ಸೇವೆ ನೀಡುವ ಮೂಲಕ ಜನಮನ್ನಣೆ ಪಡೆದು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಧರ್ಮ ಪ್ರಸಾದ್, ಮಂಗೋಟೆ ರುದ್ರೇಶ್, ಕಾಂಗ್ರೆಸ್ ಮುಖಂಡ ಮೋಹನ್ ಸೇರಿದಂತೆ ಮತ್ತಿತ್ತರಿದ್ದರು.